– ನವೀನ್ ಸೂರಿಂಜೆ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣವು 2016ರ ಅಕ್ಟೋಬರ್ 16ರಂದು ಬೆಂಗಳೂರು ನಗರದ ಶಿವಾಜಿನಗರದ ಕಮರ್ಷಿಯಲ್ ಸ್ಟ್ರೀಟ್ ಬಳಿ ನಡೆದಿತ್ತು. ಆರ್‌ಎಸ್‌ಎಸ್ ಪಥಸಂಚಲನ ಮುಗಿಸಿಕೊಂಡು ಮನೆಗೆ ಬರುತ್ತಿದ್ದಾಗ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ರುದ್ರೇಶ್ ಅವರನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಿದರು. ಸ್ಥಳೀಯ ಪೊಲೀಸರು ನಡೆಸುತ್ತಿದ್ದ ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (NIA) ವಹಿಸಿಕೊಂಡಿದ್ದು, ಇದು ಭಯೋತ್ಪಾದನಾ ಕೃತ್ಯ ಹಾಗೂ ದೊಡ್ಡ ಸಂಚು ಎಂದು ಆರೋಪಿಸಿದೆ. ಒಂದು ಕೊಲೆಯನ್ನು ‘ಭಯೋತ್ಪಾದನಾ ಕೃತ್ಯ’ ಎಂದು...
